ಕಾರ್ಕಳ, ಜು 05 (DaijiworldNews/MS): ಅಜೆಕಾರು ಸಮೀಪದ ಕೈಕಂಬ ಮಥುರಾ ಪಟ್ಲ ಎಂಬಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಐವರು ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.

ಜೀಪು ಹಾಗೂ ರಿಕ್ಷಾ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮವಾಗಿ ರಿಕ್ಷಾದಲ್ಲಿದ್ದ ಹರೀಶ್(35)ಲಲಿತಾ(62) ಪ್ರೇಮಾ(58) ಶಾರದಾ(52) ಗೀತಾ(39) ಎಂಬವರಿಗೆ ಗಾಯವಾಗಿದೆ.
ಅಜೆಕಾರು ವಿಭಾಗದ 108 ಅಂಬುಲೆನ್ಸ್ ಘಟನಾ ಸ್ಥಳಕ್ಕೆ ಅಗಮಿಸಿ ಗಾಯಾಳುಗಳಿಗೆ ಪ್ರಥಮ ಚಿಕಿತ್ಸೆ ನೀಡಿ ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
108 ಅಂಬುಲೆನ್ಸ್ ನ ಪೈಲೆಟ್ ಕಿಶೋರ್ ಹಾಗೂ ಇಎಂಟಿ ದೇವಿಕಾ ಕಾರ್ಯಚರಣೆಯಲ್ಲಿ ಪಾಲ್ಗೊಂಡರು.