ಮಂಗಳೂರು, ಜು. 12(DaijiworldNews/AA): ಈಗಾಗಲೇ ಪೊಲೀಸರು ಬಂಧಿಸಿರುವ ಚಡ್ಡಿ ಗ್ಯಾಂಗ್ ಸದಸ್ಯರು ಮಂಗಳೂರಿನಲ್ಲಿ ಅಷ್ಟೇ ಅಲ್ಲದೇ ದೇಶದ ವಿವಿಧೆಡೆ ಕೂಡ ದರೋಡೆ ಮಾಡಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.

ಮಂಗಳೂರಿನಲ್ಲಿ ಕೋಟೆಕಣಿ ರಸ್ತೆಯ ಮನೆಯೊಂದರಲ್ಲಿ ಹಲ್ಲೆ ನಡೆಸಿ ದರೋಡೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚಡ್ಡಿ ಗ್ಯಾಂಗ್ನ್ನು ಪೊಲೀಸರು ಬಂಧಿಸಿದ್ದಾರೆ. ಈ ಸುದ್ದಿ ಪ್ರಕಟವಾಗುತ್ತಿದ್ದ ಬೆನ್ನಲ್ಲೇ ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯಗಳಿಂದಲೂ ಪೊಲೀಸ್ ಆಯುಕ್ತರಿಗೆ ಕರೆಬಂದಿದೆ.
ಈ ಗ್ಯಾಂಗ್ ನ ಸದಸ್ಯರು ತಮ್ಮಲ್ಲಿ ನಡೆದಿರುವ ಪ್ರಕರಣಗಳಲ್ಲಿ ಭಾಗಿಯಾಗಿರುವ ಶಂಕೆಯನ್ನು ಉತ್ತರ ಪ್ರದೇಶ ಪೊಲೀಸರು ವ್ಯಕ್ತಪಡಿಸಿದ್ದಾರೆ.
ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶದ ರಾಜು ಸಿಂಗ್ವಾನಿಯ, ಬಾಲಿ, ಮಯೂರ್, ವಿಕ್ಕಿಯನ್ನು ಅರೆಸ್ಟ್ ಮಾಡಲಾಗಿತ್ತು. ಆದರೆ ಸ್ಥಳ ಮಹಜರಿನ ವೇಳೆ ರಾಜು ಸಿಂಗ್ವಾನಿಯ ಮತ್ತು ಬಾಲಿ ಪರಾರಿಯಾಗಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಶೂಟೌಟ್ ಮಾಡಿದ್ದರು. ಬಳಿಕ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿತ್ತು.
ಇನ್ನಿಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿದ್ದಾರೆ. ತನಿಖಾ ತಂಡ ನ್ಯಾಯಾಲಯದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದೆ.