ಬಂಟ್ವಾಳ, ಜು. 15(DaijiworldNews/AA): ಖಾಸಗಿ ಬಸ್ಸೊಂದು ಗದ್ದೆಗೆ ಪಲ್ಟಿಯಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾದ ಫಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಇಂದು ಸಂಭವಿಸಿದೆ.

ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಇದಾಗಿದೆ. ಈ ಬಸ್ ಸಂಪೂರ್ಣವಾಗಿ ಗದ್ದೆಗೆ ಪಲ್ಟಿಯಾಗಿದೆ. ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ಭಾರೀ ಮಳೆಗೆ ಗದ್ದೆಯಲ್ಲಿ ನೀರು ತುಂಬಿತ್ತು. ಹೀಗಾಗಿ ಬಸ್ ಗದ್ದೆಗೆ ಪಲ್ಟಿಯಾಗಿದ್ದರಿಂದ ಪ್ರಯಾಣಿಕರ ಮೈಯೆಲ್ಲಾ ಕೆಸರುಮಯವಾಗಿತ್ತು ಎಂದು ಹೇಳಲಾಗಿದೆ. ಇನ್ನು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.