ಕಡಬ, ಜು. 16(DaijiworldNews/AA): ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಆನೆಯೊಂದರ ಮೃತದೇಹ ತೇಲಿಬಂದ ಘಟನೆಯು ಸೋಮವಾರ ತಡರಾತ್ರಿ ಸಂಭವಿಸಿದೆ.

ಎಡಬಿಡದೆ ಸುರಿಯುತ್ತಿರುವ ಮಳೆಗೆ ಕುಮಾರಧಾರ ನದಿ ತುಂಬಿ ಹರಿಯುತ್ತಿದ್ದು, ನದಿ ನೀರಿನ ಮಟ್ಟದ ವೀಕ್ಷಣೆಗೆಂದು ಮನ್ಮಥ ಬಟ್ಟೋಡಿ ಮತ್ತಿತರರು ತೆರಳಿದ್ದ ವೇಳೆ ನೆರೆ ನೀರಿನಲ್ಲಿ ತೇಲಿಬರುತ್ತಿರುವುದು ಗಮನಿಸಿದ್ದಾರೆ. ಬಳಿಕ ಅದನ್ನು ಸೂಕ್ಷ್ಮವಾಗಿ ಗಮನಿಸಿದಾಗ ಆನೆ ಮೃತದೇಹ ಎಂದು ತಿಳಿದುಬಂದಿದೆ.
ಆನೆ ಕೆಲ ದಿನಗಳ ಹಿಂದೆಯೇ ಬೇರೆಲ್ಲೋ ಮೃತಪಟ್ಟಿದ್ದು ಈ ಭಾಗಕ್ಕೆ ತೇಲಿ ಬಂದಿರುವ ಸಂಶಯ ವ್ಯಕ್ತವಾಗಿದೆ. ನೀರಿನಲ್ಲಿ ಆನೆ ಮೃತದೇಹ ನೀರಿನಲ್ಲಿ ಕೊಚ್ಚಿ ಹೋಗಿದೆ ಎಂದು ಹೇಳಲಾಗುತ್ತಿದೆ.