ಮಂಗಳೂರು ಆ.15 (DaijiworldNews/TA): ಮಂಗಳೂರು ನಗರದ 13ರ ಹರೆಯದ ಬಾಲಕ ಥೈಲ್ಯಾಂಡಿನಲ್ಲಿ ನಡೆದ ಮಿಸ್ಟರ್ ಟೀನ್ ಸೂಪರ್ ಗ್ಲೋಬ್ ಪ್ರಶಸ್ತಿಯನ್ನು ಗೆದ್ದು ಮಂಗಳೂರಿಗೆ ಮತ್ತೊಂದು ಗರಿಮೆ ತಂದಿದ್ದಾನೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಫ್ಯಾಷನ್ ಲೋಕದಲ್ಲಿ ನಡೆಯುವ ಈ ಸ್ಪರ್ಧೆ ಆಗಸ್ಟ್ 7ರಿಂದ 10ರವರೆಗೆ ಥೈಲ್ಯಾಂಡ್ ನಲ್ಲಿ ನಡೆದಿತ್ತು. ಅಮೇರಿಕಾ, ಲೆಬನಾನ್, ಅರ್ಮೇನಿಯಾ, ಯುಎಇ, ಒಮಾನ್, ಥೈಲ್ಯಾಂಡ್, ಮಲೇಶಿಯಾ, ಶ್ರೀಲಂಕಾ, ಇಂಡೋನೇಷ್ಯಾ, ವಿಯೆಟ್ನಾಂ ಕ್ಯಾಲಿಕಟ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಆಯ್ಕೆಯಾಗಿದ್ದ ವರುಣ್, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ಜಯಗಳಿಸಿದ್ದಾರೆ ಎಂಬುವುದು ಹೆಗ್ಗಳಿಕೆ ವಿಚಾರ.
ಇನ್ನು ಇದೇ ವಿಚಾರವಾಗಿ ಮಂಗಳೂರಿನಲ್ಲಿ ಬುಧವಾರ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿದ್ದು ವರುಣ್ ಗೆ ಮುಂದೆ ಮಿಸ್ಟರ್ ಇಂಡಿಯಾ ಆಗಬೇಕೆಂಬ ಆಸೆಯಿದ್ದು, ಇಂಡಿಯನ್ ಬೆಸ್ಟ್ ಡ್ಯಾನ್ಸರ್ ಸೇರಿದಂತೆ ಎಲ್ಲಾ ಸ್ಪರ್ಧಾತ್ಮಕ ಶೋಗಳಲ್ಲಿ ಭಾಗವಹಿಸುವ ಇಚ್ಚೆ ಇದೆ ಎಂದು ಹೇಳಿದರು.
ಬಜ್ಪೆ ಸೈಂಟ್ ಜೋಸೆಫ್ ಹೈಸ್ಕೂಲ್ ನ 8ನೇ ತರಗತಿಯ ವಿದ್ಯಾರ್ಥಿಯಾಗಿರುವ ವರುಣ್ ಹಲವಾರು ನೃತ್ಯ ಸ್ಪರ್ಧೆಗಳಲ್ಲಿ ಬಹುಮಾನ ಗಳಿಸಿದ್ದಾರೆ ಹಾಗು ಜಾಹೀರಾತು ಶೂಟ್ಗಳಲ್ಲಿ ಕೂಡಾ ಭಾಗವಹಿಸುತ್ತಿದ್ದಾರೆ. ತುರುಣ್ ಲಿಡಿವಿನ್ ಡಿಕೋಸ್ಟಾ ಮತ್ತು ವಿನ್ಸೆಂಟ್ ಡಿಕೋಸ್ಟಾ ಅವರ ಪುತ್ರ. ಸುದ್ದಿಗೋಷ್ಟಿಯಲ್ಲಿ ವರುಣ್ ತಾಯಿ ಲಿಡ್ವಿನ್ ಡಿಕೋಸ್ಟಾ, ವಿನಾಲ್ ಡಿಕೋಸ್ಟಾ ಉಪಸ್ಥಿತರಿದ್ದರು.