ಹುಬ್ಬಳ್ಳಿ,ಮೇ 24(Daijiworld News/MSP): ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ರಾಜ್ಯದಲ್ಲಿ ಕಾಂಗ್ರೆಸ್ ಹೀನಾಯ ಸೋಲಿಗೆ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಎಚ್.ಕೆ ಪಾಟೀಲ್ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಹುಬ್ಬಳ್ಳಿಯ ಖಾಸಗಿ ಹೊಟೇಲ್ನಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಿದ ಮತದಾರರಿಗೆ ಧನ್ಯವಾದಗಳು ಎಂದು ಹೇಳಿ ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ನನಗೆ ಆಘಾತ ನೀಡಿದೆ, ಇದರಿಂದ ತುಂಭಾ ನೋವಾಗಿದೆ. ಅಂತಿಮವಾಗಿ ಜನರ ತೀರ್ಪಿಗೆ ತಲೆಬಾಗಬೇಕು , ಈ ಫಲಿತಾಂಶದಿಂದ ನಾವು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ. ಪಕ್ಷವನ್ನು ಸಂಘಟನೆ ಮಾಡುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕೆಲಸ ಮಾಡುತ್ತೇವೆ ಎಂದು ತಮ್ಮ ರಾಜೀನಾಮೆ ಪ್ರಕಟಿಸಿ ಈ ಹೇಳಿಕೆ ನೀಡಿದರು.
ಫಲಿತಾಂಶ ಮೈತ್ರಿ ಸರಕಾರದ ಮೇಲೆ ಪರಿಣಾಮ ಬೀರುವ ಬಗ್ಗಿನ ಪ್ರಶ್ನೆಗೆ ಸ್ವಲ್ಪ ಕಾಲ ಸುಮ್ಮನೆ ಇದ್ದು ಬಳಿಕ ನಸುನಕ್ಕು, ಫಲಿತಾಂಶ ಮೈತ್ರಿ ಸರಕಾರ ಕ್ಕೆ ಶಾಕ್ ನೀಡಿದೆ ಈ ಸೋಲು ರಾಜ್ಯ ಸರ್ಕಾರದ ಮೇಲೆ ಪ್ರಭಾವ ಬೀರುತ್ತದೆ. ಅದನ್ನು ನಮ್ಮ ಹಿರಿಯ ನಾಯಕರು ಸಮರ್ಥವಾಗಿ ನಿಭಾಯಿಸಬೇಕು ಎಂದು ಹೇಳಿದರು.