ಚಿಕ್ಕಮಗಳೂರು, ಮೇ24(Daijiworld News/SS): ಸೋಲಿನ ನೈತಿಕ ಹೊಣೆ ಹೊತ್ತು ಸಿಎಂ ಕುಮಾರಸ್ವಾಮಿ ಹಾಗೂ ಡಿಸಿಎಂ ಪರಮೇಶ್ವರ್ ರಾಜೀನಾಮೆ ನೀಡಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಮೈತ್ರಿ ಸರ್ಕಾರವಿರುವ ರಾಜ್ಯದಲ್ಲಿ ಒಂದೊಂದು ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್'ನವರು ಗೆದ್ದಿದ್ದಾರೆ, ದೇಶದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ನೇತೃತ್ವದ ಬಿಜೆಪಿಗೆ ಅದ್ಬುತ ಜಯ ಸಿಕ್ಕಿದೆ, ಮೋದಿಗೆ ಯಾರ್ಯಾರು ಬೈದಿದ್ದರೋ ಅವರಿಗೆ ಜನ ಕಪಾಳಮೋಕ್ಷ ಮಾಡಿದ್ದಾರೆ. ರಾಜ್ಯದ ಇತಿಹಾಸದಲ್ಲೇ 25 ಕ್ಷೇತ್ರದಲ್ಲಿ ಬಿಜೆಪಿ ಗೆದ್ದು ದಾಖಲೆ ನಿರ್ಮಾಣ ಮಾಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಇದೇ ವೇಳೆ, ಪ್ರಜ್ವಲ್ ರಾಜೀನಾಮೆ ಕೊಡುವ ವಿಚಾರ ಸಂಬಂಧ ಮಾತನಾಡಿದ ಅವರು, ಇದೆಲ್ಲಾ ಒಂದು ಗಿಮಿಕ್ ಅಷ್ಟೆ, ನಾಟಕ ಎಂದು ವ್ಯಂಗ್ಯವಾಡಿದರು.
ಅತಿ ಹೆಚ್ಚು ಕುತೂಹಲ ಕೆರಳಿಸಿರುವ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭರ್ಜರಿ ಗೆಲುವು ದಾಖಲಿಸಿದ್ದಾರೆ. ತಮ್ಮ ನಿಕಟ ಪ್ರತಿಸ್ಪರ್ಧಿ ಜೆಡಿಎಸ್ನಿಂದ ಕಣಕ್ಕಿಳಿದಿರುವ ಪ್ರಮೋದ್ ಮಧ್ವರಾಜ್ ವಿರುದ್ಧ ಶೋಭಾ ಭರ್ಜರಿ ಗೆಲುವು ದಾಖಲಿಸಿದ್ದಾರೆ.