ನವದೆಹಲಿ,ಆ,16 (DaijiworldNews/AK) : ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆಗಳಿಗೆ ಚುನಾವಣಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜಮ್ಮು-ಕಾಶ್ಮೀರದಲ್ಲಿ 3 ಹಂತ ಹಾಗೂ ಹರಿಯಾಣದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ, ಜಮ್ಮು-ಕಾಶ್ಮೀರದಲ್ಲಿ 3 ಹಂತಗಳಲ್ಲಿ ಸೆ.18, ಸೆ.25, ಅ.1 ಚುನಾವಣೆ ನಡೆಯಲಿದೆ. ಹರಿಯಾಣದಲ್ಲಿ ಅ.1 ರಂದು ಮತದಾನ ನಡೆಯಲಿದೆ. ಅಕ್ಟೋಬರ್ 4ಕ್ಕೆ ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.
ಹರಿಯಾಣದಲ್ಲಿ 90 ವಿಧಾನಸಭೆ ಕ್ಷೇತ್ರಗಳಿದ್ದು, 2.01 ಕೋಟಿ ಮತದಾರರು ನೋಂದಣಿಯಾಗಿದ್ದಾರೆ. 20,629 ಮತದಾನ ಕೇಂದ್ರಗಳ ನಿರ್ಮಾಣವಾಗಿವೆ. ಗ್ರಾಮೀಣ ಭಾಗದಲ್ಲಿ 13,497 ಹಾಗೂ ನಗರ ಭಾಗದಲ್ಲಿ 7132 ಮತದಾನ ಕೇಂದ್ರಗಳಿವೆ.