ಬೆಂಗಳೂರು, ಮೇ24(Daijiworld News/SS): ಎಲ್ಲ 37 ಶಾಸಕರು ಒಟ್ಟಾಗಿರಬೇಕು. ಯಾವುದೇ ಕಾರಣಕ್ಕೂ ಆಪರೇಷನ್ ಕಮಲಕ್ಕೆ ಒಳಗಾಗಬಾರದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ಡಿ ದೇವೇಗೌಡ ಮನವಿ ಮಾಡಿದ್ದಾರೆ.
ಕಾರ್ಯಕರ್ತರು ಯಾರೂ ಧೃತಿಗೆಡಬಾರದು. ತುಮಕೂರಿನ ಶಾಸಕರು ಹಾಗೂ ಮುಖಂಡರು ಮತ್ತು ಕಾರ್ಯಕರ್ತರು ಇನ್ನೂ ಸ್ವಲ್ಪ ಶ್ರಮವಹಿಸಿ ಕೆಲಸ ಮಾಡಿದ್ದರೆ ಗೆಲ್ಲಬಹುದಾಗಿತ್ತು. ಸೋತಿರುವುದಕ್ಕೆ ಪಶ್ಚಾತ್ತಾಪ ಬೇಡ. ಕಾರ್ಯಕರ್ತರು ಧೃತಿಗೆಡದೇ ಪಕ್ಷ ಸಂಘಟಿಸಿ ಎಂದು ತಿಳಿಸಿದ್ದಾರೆ.
ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಯಾವುದೇ ಕಾರಣಕ್ಕೂ ಮೈತ್ರಿ ಸರ್ಕಾರ ಪತನವಾಗುವುದಿಲ್ಲ. ಸಿಎಂ ಕುಮಾರಸ್ವಾಮಿ ಮುಂದುವರಿಯಲಿದ್ದಾರೆ. ಯಾವುದೇ ಆತಂಕ ಬೇಡ ಎಂದು ಹೇಳಿದ್ದಾರೆ.