ಮೈಸೂರು ಆ.18 (DaijiworldNews/AK) :ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಶ್ರೀ. ಜೊಕಿಂ ಸ್ಟಾನಿ ಆಲ್ವಾರಿಸ್ ಮತ್ತು ಸದಸ್ಯರಾದ ನವೀನ್ ಸೇರಿದಂತೆ ಅನೇಕರು ಇಂದು ದಕ್ಷಿಣ ಕನ್ನಡ ಮತ್ತು ಕರಾವಳಿ ಜಿಲ್ಲಾ ಸಂಘಗಳ ಒಕ್ಕೂಟ (ರಿ), ಮೈಸೂರಿನ ಅಧ್ಯಕ್ಷರಾದ ಗ್ರೇಶಿಯನ್ ರೋಡ್ರಿಗಸ್ ರವರ ಅವರ ನಿವಾಸಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಕರಾವಳಿ ಮೂಲದ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಒಕ್ಕೂಟದ ಸದಸ್ಯರುಗಳು ಹಾಜರಿದ್ದು ಅಕಾಡೆಮಿಯ ಅಧ್ಯಕ್ಷರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು ಹಾಗೂ ವಿವಿಧ ಅಕಾಡೆಮಿಗಳ ಸಹಯೋಗದಲ್ಲಿ ಮುಂದಿನ ದಿನಗಳಲ್ಲಿ ಮೈಸೂರಿನಲ್ಲಿ ಕಾರ್ಯಕ್ರಮ ನಡೆಸುವ ಬಗ್ಗೆ ಚರ್ಚಿಸಲಾಯಿತು.