ತಿರುವನಂತಪುರಂ, ಮೇ25(Daijiworld News/SS): ಸುಮಾರು 15 ಐಎಸ್'ಐಎಸ್ ಭಯೋತ್ಪಾದಕರು ಶ್ರೀಲಂಕಾದಿಂದ ಲಕ್ಷದ್ವೀಪದ ಮಿನಿಕಾಯ್ ದ್ವೀಪದತ್ತ ತೆರಳುತ್ತಿದ್ದಾರೆ ಎಂಬ ಬೇಹುಗಾರಿಕೆ ಸಂಸ್ಥೆಗಳ ವರದಿಗಳ ಹಿನ್ನೆಲೆಯಲ್ಲಿ, ಕೇರಳ ಕರಾವಳಿಯಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ.
ಶ್ವೇತ ದೋಣಿಯಲ್ಲಿ ಭಯೋತ್ಪಾದಕರು ದ್ವೀಪದತ್ತ ಹೊರಟಿದ್ದು, ಅವರು ಕೇರಳ ಕರಾವಳಿ ಪ್ರವೇಶಿಸುವುದನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರು ಸೂಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬೇಹುಗಾರಿಕೆ ವರದಿಗಳ ಹಿನ್ನೆಲೆಯಲ್ಲಿ ತ್ರಿಶ್ಶೂರ್ ಹಾಗೂ ಕೋಜಿಕೋಡ್ ಕರಾವಳಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಹಾಗೂ ಪಹರೆ ತೀವ್ರಗೊಳಿಸಲಾಗಿದೆ. ಕರಾವಳಿ ಪ್ರದೇಶಗಳಲ್ಲಿನ ಅಸಹಜ ಚಟುವಟಿಕೆಗಳ ಮೇಲೆ ಕಣ್ಣಿಡುವಂತೆ ಮೀನುಗಾರರ ಸಮಿತಿಗಳಿಗೆ ಸೂಚನೆ ನೀಡಲಾಗಿದೆ.