ಗೊಂಡಾ, ಮೇ25(Daijiworld News/SS): ಉತ್ತರ ಪ್ರದೇಶದ ಗೊಂಡಾದಲ್ಲಿ ಮುಸ್ಲಿಂ ಕುಟುಂಬವೊಂದು ಮೋದಿ ಜಯಗಳಿಸಿದ ದಿನದಂದು ಜನಿಸಿದ ಮಗುವಿಗೆ ನರೇಂದ್ರ ಮೋದಿ ಎಂದು ಹೆಸರಿಟ್ಟಿರುವ ಪ್ರಸಂಗ ನಡೆದಿದೆ.
ನರೇಂದ್ರ ಮೋದಿ ಅವರ ಆಡಳಿತ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಆ ಮಗುವಿನ ತಾಯಿ ಮೇನಜ್ ಬೇಗಂ, ಮೋದಿ ಅವರಂತೆ ಜೀವನದಲ್ಲಿ ಯಶಸ್ಸು ಸಾಧಿಸಲಿ ಎಂದು ಅವರ ಹೆಸರನ್ನು ಇಡಲಾಗಿದೆ ಎಂದು ಹೇಳಿದರು.
ನರೇಂದ್ರ ಮೋದಿ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿದ ದಿನದಂದು ಗಂಡು ಜನಿಸಿದ ಹಿನ್ನೆಲೆಯಲ್ಲಿ, ದುಬೈಯಲ್ಲಿರುವ ಅವರ ತಂದೆ ಜೊತೆ ದೂರವಾಣಿ ಮೂಲಕ ಮಾತನಾಡಿ ನರೇಂದ್ರ ಮೋದಿ ಎಂದು ಹೆಸರು ಇಡುವಂತೆ ಸೂಚಿಸಿದ್ದಾರೆ ಎಂದು ಮಗುವಿನ ತಾತ ಮೊಹಮ್ಮದ್ ಇದ್ರೀಸ್ ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.
ಮಾತ್ರವಲ್ಲ, ಎರಡನೇ ಅವಧಿಯ ಮೋದಿ ಸರ್ಕಾರದ ಅವಧಿಯಲ್ಲಿ ಕೇಂದ್ರ ಸರ್ಕಾರ ನಮ್ಮಗಾಗಿ ಉತ್ತಮ ಯೋಜನೆಗಳನ್ನು ಜಾರಿಗೊಳಿಸುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.
ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಪ್ರಚಂಡ ಜಯದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿಜಯೋತ್ಸವ ಆಚರಿಸುತ್ತಿದೆ.