ಬೆಂಗಳೂರು, ಆ.28(DaijiworldNews/TA):ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್ನಲ್ಲಿ ಬುಧವಾರ ಬೀದಿ ನಾಯಿಗಳ ಅಟ್ಟಹಾಸಕ್ಕೆ ಮಹಿಳೆಯೊಬ್ಬರು ಬಲಿಯಾದ ಘಟನೆ ನಡೆದಿದೆ.
60 ವರ್ಷದ ಮಹಿಳೆ ಕ್ಯಾಂಪಸ್ನಲ್ಲಿ ವಾಕ್ ಮಾಡುತ್ತಿದ್ದ ಸಂದರ್ಭ ಏಳೆಂಟು ಬೀದಿ ನಾಯಿಗಳು ಅವರ ಮೇಲೆ ಎರಗಿ ದಾಳಿ ನಡೆಸಿವೆ ಎಂದು ವರದಿಯಾಗಿದೆ. ಘಟನೆಯ ಪರಿಣಾಮ ಮಹಿಳೆಯ ತಲೆ ಹಿಂಭಾಗ, ಮುಖ, ಕೈ ಹಾಗೂ ಕತ್ತಿನ ಭಾಗ ಛಿದ್ರಗೊಂಡಿದೆ. ತಕ್ಷಣ ಮಹಿಳೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸದರೂ ಚಿಕಿತ್ಸೆ ಫಲಿಸದೆ ಮಹಿಳೆ ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯ ಅಳಿಯ ಏರ್ಫೋರ್ಸ್ನಲ್ಲಿ ಕೆಲಸ ಮಾಡುತ್ತಿದ್ದರು.ಈ ಕಾರಣದಿಂದ ಅಳಿಯ-ಮಗಳನ್ನ ಭೇಟಿಯಾಗಲು ಮಹಿಳೆ ಬಿಹಾರದಿಂದ ಬೆಂಗಳೂರಿಗೆ ಬಂದಿದ್ದರು. ಬುಧವಾರ ಬೆಳಗ್ಗೆ ಮಹಿಳೆ ವಾಕ್ ಮಾಡುವಾಗ ಈ ಘಟನೆ ನಡೆದಿದೆ. ಮಹಿಳೆಯ ಮೃತದೇಹವನ್ನು ವೈದ್ಯರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.