ಮಂಡ್ಯ, ಮೇ25(Daijiworld News/SS): ನಾವೆಲ್ಲರೂ ಒಂದೇ ಕುಟುಂಬದಂತೆ ಬದುಕೋಣ, ರಾಜಕೀಯ ಕಿತ್ತಾಟಗಳನ್ನು ದಯವಿಟ್ಟು ಯಾರೂ ಮಾಡಬೇಡಿ ಸುಮಲತಾ ಅಂಬರೀಷ್ ಮನವಿ ಮಾಡಿದ್ದಾರೆ.
ಚುನಾವಣೆ ಮುಗಿದಿದೆ. ಚುನಾವಣೆಯ ಸಂದರ್ಭದಲ್ಲಿ ಗೆಲುವಿನ ಪ್ರತಿಷ್ಠೆಗಳು ಪರಸ್ಪರ ವೈಷಮ್ಯ ಸಹಜವಾಗಿ ಉಂಟಾಗುತ್ತದೆ. ಆದರೆ, ನಾವೆಲ್ಲರೂ ಒಂದೇ ಊರಿನಲ್ಲಿ ಬದುಕುತ್ತಿರುವವರು ಪರಸ್ಪರ ಹೊಂದಾಣಿಕೆಯ ಜೀವನ ನಡೆಸುತ್ತಿರುವವರು. ಚುನಾವಣೆಯ ದ್ವೇಷ-ವೈಷಮ್ಯ ಬಿಟ್ಟು ಬಿಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಒಂದೇ ಕುಟುಂಬದಂತೆ ನಾವೆಲ್ಲರೂ ಬದುಕಬೇಕಾಗಿದೆ. ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಇವೆಲ್ಲವೂ ಚುನಾವಣೆಗೆ ಮಾತ್ರ ಸೀಮಿತವಾಗಿರಬೇಕು. ಚುನಾವಣೆಯ ನಂತರ ನಮ್ಮ ಊರು ನಮ್ಮ ಸಮಸ್ಯೆಗಳ ವಿಚಾರದಲ್ಲಿ ಸಾಮೂಹಿಕವಾಗಿ ಚರ್ಚಿಸಬೇಕು ಹಾಗೂ ಚಿಂತಿಸಬೇಕು. ಚುನಾವಣೆ ಮುಗಿದು ಫಲಿತಾಂಶ ಬಂದ ನಂತರವೂ ದ್ವೇಷವನ್ನು ಮುಂದುವರಿಸಬಾರದು ಎಂದು ತಿಳಿಸಿದ್ದಾರೆ.
ಮಂಡ್ಯದ ಜನತೆಯಾದ ನಾವೆಲ್ಲರೂ ಒಂದೇ ಕುಟುಂಬದಂತೆ ಬದುಕೋಣ. ರಾಜಕೀಯ ಕಿತ್ತಾಟಗಳನ್ನು ದಯವಿಟ್ಟು ಯಾರೂ ಮಾಡಬೇಡಿ .ಇದು ನನ್ನ ಜನತೆಯಲ್ಲಿ ನನ್ನ ಪ್ರೀತಿಯ ಮನವಿ ಎಂದು ತಿಳಿಸಿದ್ದಾರೆ.