ಬೆಂಗಳೂರು,ಮೇ26(Daijiworld News/AZM):ಸಿಎಂ ಕುಮಾರಸ್ವಾಮಿಯವರು ಮಾಧ್ಯಮ ವಿರೋಧಿ ಧೋರಣೆಯನ್ನು ಕೈಗೊಂಡಿದ್ದು, ಮಾಧ್ಯಮಗಳೊಂದಿಗೆ ಮಾತನಾಡದಂತೆ ಜೆಡಿಎಸ್ ಪಕ್ಷದ ಮುಖಂಡರಿಗೆ ತಾಕೀತು ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ರಾಜ್ಯದಲ್ಲಿ ಕೇವಲ ಒಂದೇ ಒಂದು ಕ್ಷೇತ್ರದಲ್ಲಿ ಜಯ ಗಳಿಸಿದ ಹಿನ್ನೆಲೆ ಬೇಸರಗೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಇದೀಗ ಮಾಧ್ಯಮಗಳಿಗೆ ನಿರ್ಬಂಧ ಹೇರಿದ್ದಾರೆ.
ಮಾಧ್ಯಗಳೊಂದಿಗೆ ಮಾತನಾಡದಂತೆ ಜೆಡಿಎಸ್ ಪಕ್ಷದ ಮುಖಂಡರಿಗೆ ತಾಕೀತು ಮಾಡಿರುವ ಅವರು, ಈ ಮಾತು ತಮಗೂ ಅನ್ವಯವಾಗುತ್ತದೆ ಎಂದು ಹೇಳಿದ್ದಾರೆ. ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಚರ್ಚೆಯಲ್ಲಿ ಪಾಲ್ಗೊಳ್ಳುವುದು, ಹೇಳಿಕೆಗಳನ್ನು ನೀಡುವುದು, ಸಭೆಯ ಟಿಪ್ಪಣಿಗಳನ್ನು ನೀಡಬಾರದು ಎಂದು ಜೆಡಿಎಸ್ ವರಿಷ್ಠರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.