ಬೆಂಗಳೂರು, ಸೆ.02 (DaijiworldNews/AK):ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಮತ್ತು ಇಲಾಖೆಯಲ್ಲಿ 2022 ಮತ್ತು 2023ನೇ ಸಾಲಿನಲ್ಲಿ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ನಾಳೆ (ಸೆ.3) ಪ್ರದಾನ ಮಾಡಲಿದ್ದಾರೆ.ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಾಳೆ ಸಂಜೆ 4 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
310 ಅರಣ್ಯ ವೀ ಕ್ಷಕರ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು. ಒಟ್ಟು 1,94,007 ಅಭ್ಯರ್ಥಿ ಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಎಸ್ಸೆಸ್ಸೆಲ್ಸಿ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ಗಳಿಸಿದ ಅತಿಹೆಚ್ಚು ಅಂಕ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಮೂಲಕ ಪಾರದರ್ಶಕವಾಗಿ 267 ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಖಂಡ್ರೆ ಎಂದು ತಿಳಿಸಿದ್ದಾರೆ.