ಜಮ್ಮು, ಮೇ26(Daijiworld News/SS): ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿರುವ ಅಂತಾರಾಷ್ಟ್ರೀಯ ಗಡಿ ರೇಖೆ (ಎಲ್ಒಸಿ) ಬಳಿ ಪಾಕಿಸ್ತಾನ ನಡೆಸಿದ ಗುಂಡಿನ ದಾಳಿಯಲ್ಲಿ ಯುವಕನೊಬ್ಬ ಗಭೀರ ಗಾಯಗೊಂಡಿರುವ ಘಟನೆ ವರದಿಯಾಗಿದೆ.
ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಪೋಖರ್ನಿ ಗ್ರಾಮದ ನಿವಾಸದಲ್ಲಿ ಮಲಗಿದ್ದ ಮೊಹಮ್ಮದ್ ಇಶಾಕ್ (18) ಎಂಬ ಯುವಕ ಗಂಭೀರ ಗಾಯಗೊಂಡಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನೌಶೇರಾ ವಲಯದ ಗಡಿ ರೇಖೆ ಬಳಿ ಪಾಕಿಸ್ತಾನ ಮತ್ತೆ ಪುಂಡಾಟಿಕೆ ಪ್ರದರ್ಶಸಿದ್ದು, ಭಾರತೀಯ ಸೇನೆ ಕೂಡ ತಕ್ಕ ಉತ್ತರ ನೀಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದೀಗ ಘಟನೆಯಲ್ಲಿ ಗಾಯಗೊಂಡಿದ್ದ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.