ಬೆಂಗಳೂರು, ಸೆ.04 (DaijiworldNews/AK): ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದರು.
ಮುಂದೆ ನಾನು ಮುಖ್ಯಮಂತ್ರಿ ಆಗುತ್ತೇನೆ ಅಂತ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ. ಇದು ರಾಜಕೀಯ ತಂತ್ರ. ತಮ್ಮ ಪಕ್ಷ ಉಳಿಸಿಕೊಳ್ಳಲು ಹಾಗೆ ಹೇಳುತ್ತಾರೆ.ರಾಜ್ಯದಲ್ಲಿ ಬಲಿಷ್ಠ ಸರ್ಕಾರವಿದೆ, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಸಮರ್ಥ ನಾಯಕತ್ವವಿದೆ. ಕಾಂಗ್ರೆಸ್ ಸರ್ಕಾರದ ಇರುತ್ತದೆ, ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ ಎಂದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿಗಳ ಪಾತ್ರವಿಲ್ಲ. ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲು ಯಾವುದೇ ದಾಖಲೆ ಇಲ್ಲ. ಎಷ್ಟು ಜನ ತನಿಖೆ ಎದುರಿಸಿಲ್ಲ, ಅಮಿತ್ ಶಾ, ಪ್ರಧಾನಮಂತ್ರಿ ತನಿಖೆ ಎದುರಿಸಿಲ್ಲ ಎಂದು ಪ್ರಶ್ನೆ ಹಾಕಿದರು.