ತೆಲಂಗಾಣ, ಸೆ.5,(DaijiworldNews/TA):ತೆಲಂಗಾಣದ ಭದ್ರಾದ್ರಿ ಕೊತಗುಡಂ ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಪೊಲೀಸರು ನಕ್ಸಲರೊಂದಿಗೆ ಗುಂಡಿನ ಚಕಮಕಿ ನಡೆಸಿದ್ದಾರೆ. ಎನ್ಕೌಂಟರ್ನಲ್ಲಿ 6 ನಕ್ಸಲರು ಸಾವನ್ನಪ್ಪಿದ್ದು, ಇಬ್ಬರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತೆಲಂಗಾಣದ ಭದ್ರಾದ್ರಿ ಕೊತಗುಡೆಂ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಪೊಲೀಸರು ಮತ್ತು ಮಾವೋವಾದಿಗಳ ನಡುವೆ ಎನ್ಕೌಂಟರ್ ನಡೆದಿದೆ ಎಂದು ಭದ್ರಾದ್ರಿ ಕೊತಗುಡೆಂ ಜಿಲ್ಲಾ ವರಿಷ್ಠಾಧಿಕಾರಿ ರೋಹಿತ್ ರಾಜ್ ಹೇಳಿದ್ದಾರೆ.
ದೀರ್ಘ ಸಮಯದ ಗುಂಡಿನ ಚಕಮಕಿಯಲ್ಲಿ, ಸಮವಸ್ತ್ರಧಾರಿ ಒಂಬತ್ತು ನಕ್ಸಲರ ಶವಗಳು ಸ್ಥಳದಲ್ಲಿ ಸಿಕ್ಕಿವೆ. ಎನ್ಕೌಂಟರ್ ಸ್ಥಳದಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದ್ದಾರೆ.