ಹಾವೇರಿ, ಸೆ.8(DaijiworldNews/AK): ಮಹದಾಯಿ ಯೋಜನೆಗೆ ಹಿನ್ನಡೆಯಾಗಿರುವುದೇ ಕಾಂಗ್ರೆಸ್ ಪಕ್ಷದಿಂದ, ಮಹಾದಾಯಿ ಹನಿ ನೀರನ್ನು ರಾಜ್ಯಕ್ಕೆ ಕೊಡಲ್ಲ ಎಂದು ಸೋನಿಯಾ ಗಾಂಧಿ ಹೇಳಿದ್ದರು. ಟ್ರಿಬ್ಯುನಲ್ ಮಾಡುವ ಅಗತ್ಯ ಇಲ್ಲದಿದ್ದರೂ ಟ್ರಿಬ್ಯುನಲ್ ಮಾಡಿದ್ದರು ಎಂದು ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ಪಕ್ಷದ ನಡೆಯನ್ನು ಟೀಕಿಸಿದ್ದಾರೆ.

ಮಹದಾಯಿ ವಿಚಾರವಾಗಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗುವುದಾಗಿ ಸಚಿವ ಎಚ್.ಕೆ.ಪಾಟೀಲ್ ಹೇಳಿರುವ ಕುರಿತು ಪ್ರತಿಕ್ರಯಿಸಿದ, ಅವರು, ಟ್ರಿಬ್ಯುನಲ್ ಅಧ್ಯಕ್ಷರಿಗೆ ಒಂದು ಆಫೀಸ್ ಕೂಡಾ ಕೊಡಲಿಲ್ಲ, ವಿಳಂಬ ಮಾಡಿದ್ದರು. ಈಗ ವೈಲ್ಡ್ ಲೈಫ್ ಬೋರ್ಡ್ ಅನುಮತಿ ತೆಗೆದುಕೊಳ್ಳಬೇಕು. ಅದಕ್ಕೆ ಈಗಾಗಲೇ ಕೇಂದ್ರ ಸಚಿವ ಜೋಶಿಯವರು ಉತ್ತರ ಕೊಟ್ಟಿದ್ದಾರೆ. ನಮಗೆ ಅನುಮತಿ ಸಿಗುತ್ತದೆ ಎಂಬ ವಿಶ್ವಾಸವಿದೆ ಎಂದರು.