ಬೆಂಗಳೂರು, ಸೆ.9(DaijiworldNews/AA): ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ನಾಲ್ವರು ಆರೋಪಿಗಳ ವಿರುದ್ಧ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಸಲ್ಲಿಸಿದ್ದಾರೆ. ಆರೋಪಿಗಳಾದ ಅಬ್ದುಲ್ ಮತಿನ್ ತಾಹಾ, ಮುಸಾವೀರ್ ಹುಸೇನ್, ಶೋಯೆಬ್ ಮಿರ್ಜಾ ಸೇರಿ ನಾಲ್ವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರು ಸೇರಿ ಒಟ್ಟು 9 ಮಂದಿ ಗಾಯಗೊಂಡಿದ್ದರು. ಇನ್ನು ಮಾರ್ಚ್ 3 ರಂದು ಎನ್ಐಎ ಪ್ರಕರಣ ದಾಖಲಿಸಿಕೊಂಡಿತ್ತು.