ಬೆಂಗಳೂರು, ಸೆ.10(DaijiworldNews/AK): ಬೆಂಗಳೂರು, ಸೆ 10 (ಐಎಎನ್ಎಸ್): ಇತ್ತೀಚೆಗೆ ರಾಜ್ಯ ಸರ್ಕಾರ ರವಾನಿಸಿದ್ದ ಸುಮಾರು 15 ಮಸೂದೆಗಳನ್ನು ತಿರಸ್ಕರಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಅವುಗಳಲ್ಲಿ ಮೂರು ಮಸೂದೆಗೆ ಒಪ್ಪಿಗೆ ಸೋಮವಾರ ಸೂಚಿಸಿದ್ದಾರೆ.
ಈ ಮೂಲಕ ಸರ್ಕಾರ ಹಾಗೂ ರಾಜಭವನದ ನಡುವೆ ಇದ್ದ ಭಿನ್ನಮತ ಶಮನವಾದಂತೆ ಕಾಣುತ್ತಿದೆ. ಕೆಲವು ದಿನಗಳ ಹಿಂದೆ ವಾಪಸ್ ಕಳುಹಿಸಿದ್ದ 3 ವಿಧೇಯಕಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅಂಗೀಕಾರ ಹಾಕಿದ್ದಾರೆ.
ಕರ್ನಾಟಕ ಸಾರ್ವಜನಿಕ ಪರೀಕ್ಷೆಯಲ್ಲಿನ (ನೇಮಕ) ಭ್ರಷ್ಟಾಚಾರ ಮತ್ತು ಅನುಚಿತ ವಿಧಾನಗಳ ನಿಯಂತ್ರಣ ವಿಧೇಯಕ, ರೇಣುಕಾ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪೌರಾಡಳಿತ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಪಾಲರು ಅಸ್ತು ಎಂದಿದ್ದಾರೆ.
ಈ ಸಂಬಂಧ ಕಳೆದ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಸೂಕ್ತ ಸ್ಪಷ್ಟೀ ಕರಣದೊಂದಿಗೆ ವಿಧೇಯಕಗಳನ್ನು ರಾಜ್ಯಪಾಲರಿಗೆ ವಾಪಸ್ ಕಳುಹಿಸಲಾಗಿತ್ತು.ರಾಜ್ಯ ಸರ್ಕಾರ ಕಳುಹಿಸಿದ್ದ ಒಟ್ಟು 11 ವಿಧೇಯಕಗಳಿಗೆ ರಾಜ್ಯಪಾಲರು ಸ್ಪಷ್ಟನೆ ಕೇಳಿದ್ದರು. ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ಅನುಮತಿ ಕೊಡುವುದಕ್ಕಿಂ ತ ಪೂರ್ವದಲ್ಲಿಯೇ ಕೆಲ ವಿಧೇಯಕಗಳನ್ನು ವಾಪಸ್ ಕಳುಹಿಸಲಾಗಿತ್ತು