ಬೆಂಗಳೂರು, ಸೆ.10(DaijiworldNews/AK): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಫಾಸ್ಟ್ ಟ್ರ್ಯಾಕ್ ಕೋರ್ಟ್ ಅಥವಾ ಸ್ಪೆಷಲ್ ಕೋರ್ಟ್ಗೆ ಮನವಿ ಚಿಂತನೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ. ಫಾಸ್ಟ್ ಟ್ರ್ಯಾಕ್ ಕೋರ್ಟ್ ಅಥವಾ ಸ್ಪೆಷಲ್ ಕೋರ್ಟ್ಗೆ ಮನವಿ ಮಾಡಲು ಚಿಂತನೆ ನಡೆಸಲಾಗುತ್ತಿದೆ. ಬಹುಪಾಲು ರಿಪೋರ್ಟ್ಗಳು ಚಾರ್ಜ್ಶೀಟ್ ಸಲ್ಲಿಕೆಗೂ ಮುನ್ನವೇ ನಮ್ಮ ಕೈಸೇರಿದೆ. ಮತ್ತಷ್ಟು ರಿಪೋರ್ಟ್ ಬರಬೇಕಿದೆ, ಆ ಬಳಿಕ ಕೋರ್ಟ್ಗೆ ಸಲ್ಲಿಸುತ್ತೇವೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಪರಪ್ಪನ ಅಗ್ರಹಾರದಲ್ಲಿ ದರ್ಶನ್ಗೆ ರಾಜಾತಿಥ್ಯ ವಿಚಾರಕ್ಕೆ ಪ್ರತಿಕ್ರಿಯಿ, ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.