ಮೈಸೂರು,ಮೇ26(DaijiworldNews/AZM):ರಮೇಶ್ ಜಾರಕಿಹೊಳಿ ಸೇರಿದಂತೆ ಯಾರೊಬ್ಬರೂ ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ ಎಂದು ಮಾಜೀ ಸಿಎಂ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮದೊಂದಿಗೆ ಮಾತನಾಡಿದ ಅವರು,ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಜನತೆ ಬಿಜೆಪಿಗೆ ಮತ ನೀಡಿರುವುದು ಕೇಂದ್ರದಲ್ಲಿ ಅಧಿಕಾರ ನಡೆಸಲಿ ಎಂದೇ ಹೊರತು ರಾಜ್ಯದಲ್ಲಿನ ಸರ್ಕಾರ ಬೀಳಿಸಿ, ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದಲ್ಲ. ಲೋಕಸಭಾ ಫಲಿತಾಂಶ ನಮಗೆ ವಿರುದ್ಧವಾಗಿ ಬಂದ ಮಾತ್ರಕ್ಕೆ ವಿಧಾನಸಭೆಯನ್ನೂ ವಿಸರ್ಜನೆ ಮಾಡಲಿ ಎಂದು ಹೇಳುವುದು ನಾನ್ ಸೆನ್ಸ್ ಎಂದಿದ್ದಾರೆ.
ಇದೇ ವೇಳೆ ಶಾಸಕರಾದ ಡಾ.ಸುಧಾಕರ್, ರಮೇಶ್ ಜಾರಕಿಹೊಳಿ ಎಸ್. ಎಂ. ಕೃಷ್ಣ ಜೊತೆಗಿನ ಭೇಟಿಯನ್ನು ಕಾಕತಾಳಿಯ ಎಂದಿರುವ ಸಿದ್ದರಾಮಯ್ಯ, ರಮೇಶ್ ಜಾರಕಿಹೊಳಿ ಸೇರಿದಂತೆ ಯಾರೊಬ್ಬರೂ ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಸರ್ಕಾರ ಬೀಳುತ್ತೆ ಅಂತ ಯಡಿಯೂರಪ್ಪ ಹೇಳುತ್ತಲೇ ಇದ್ದಾರೆ, ಇನ್ನೂ 4 ವರ್ಷ ಅದೇ ಮಾತು ಹೇಳುತ್ತಲೇ ಇರುತ್ತಾರೆ. ಸರ್ಕಾರ ಮಾತ್ರ ಸುಭದ್ರವಾಗಿರುತ್ತದೆ ಎಂಬ ಭರವಸೆಯಿದೆ ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.
ಇನ್ನು ರಾಜ್ಯ ಸರ್ಕಾರ ಬೀಳುತ್ತದೆ ಎಂದು ಬಿ.ಎಸ್. ಯಡಿಯೂರಪ್ಪ ಒಂದು ವರ್ಷದಿಂದಲೂ ಹೇಳುತ್ತಲೇ ಇದ್ದಾರೆ. ಜೂ. 1ಕ್ಕೆ ಸರ್ಕಾರ ಬೀಳದಿದ್ದರೆ, ಮೈತ್ರಿ ಸರ್ಕಾರ ಅಸ್ಥಿರವಾಗದಿದ್ದರೆ ಬಿ.ಎಸ್. ಯಡಿಯೂರಪ್ಪನವರು ರಾಜೀನಾಮೆ ಕೊಡುತಾರೆಯೇ ಎಂದು ಸಿದ್ದರಾಮಯ್ಯಪ್ರಶ್ನಿಸಿದ್ದಾರೆ.