ಬೆಂಗಳೂರು, ಸೆ.15 (DaijiworldNews/AK): ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ.ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್ ಫೋನ್ ಲೊಕೇಷನ್ ಟ್ರೇಸ್ ಮಾಡಿ ಪತ್ತೆ ಮಾಡಿ ನಂತರ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ. ಕೇಸ್ ದಾಖಲಾದಾಗಿನಿಂದ ಮುನಿರತ್ನ ಮೇಲೆ ಪೊಲೀಸರು ನಿಗಾ ವಹಿಸಿದ್ದರು.