ಕೋಲ್ಕತಾ, ಮೇ28(Daijiworld News/SS): ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿರುವ ಎನ್ಡಿಎ ಮೈತ್ರಿಕೂಟದ ನರೇಂದ್ರ ಮೋದಿ ಅವರು ಎರಡನೆಯ ಅವಧಿಗೆ ಮೇ 30ರಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿದೆ.
ಪ್ರಧಾನಿ ಮೋದಿ ಅವರು ರಾಜಕೀಯ ವೈರತ್ವವನ್ನು ಮರೆತು, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರಿಗೆ ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದು, ಅದನ್ನು ದೀದಿ ಒಪ್ಪಿಕೊಂಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೇ 30 ರಂದು ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹೋಗುವುದಾಗಿ ಹೇಳಿದ್ದಾರೆ.
ಅದು ಪ್ರಮಾಣವಚನ ಸ್ವೀಕಾರ ಸಮಾರಂಭವಾಗಿರುವುದರಿಂದ ನಾನು ಭಾಗವಹಿಸಲು ಯತ್ನಿಸುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.