ಬೆಂಗಳೂರು, ಮೇ 28(Daijiworld News/SM): ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಪಕ್ಷಕ್ಕೆ ಒಳಿತಾಗಿರುವುದೇ ಜಾಸ್ತಿ ಎಂದು ಪಕ್ಷದ ಹಿರಿಯ ನಾಯಕ ವೀರಪ್ಪ ಮೊಯಿಲಿ ಹೇಳಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೀನಾಯವಾಗಿ ಸೋಲಲು ರಾಹುಲ್ ಕಾರಣ ಎಂಬ ಟೀಕೆಗಳು ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆ ವೀರಪ್ಪ ಮೊಯಿಲಿ ಪ್ರತಿಕ್ರಿಯೆ ನೀಡಿದ್ದಾರೆ.
ಈಗಿನ ಸನ್ನಿವೇಶದಲ್ಲಿ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬಾರದು. 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಅವರು ಕಾಂಗ್ರೆಸ್ ಪಕ್ಷವನ್ನು ಹೆಚ್ಚು ಪ್ರಸ್ತುತಗೊಳಿಸಿದ್ದಾರೆ. ಈ ಸನ್ನಿವೇಶದಲ್ಲಿ ಪಕ್ಷದ ನಾಯಕತ್ವವನ್ನು ತ್ಯಜಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಮೊಯಿಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.