ನವದೆಹಲಿ, ಮೇ29(Daijiworld News/SS): ರಾಜೀನಾಮೆಯ ತೀರ್ಮಾನವನ್ನು ಹಿಂಪಡೆಯುವಂತೆ ಕೋರಿ ರಾಹುಲ್ ನಿವಾಸದ ಎದುರು ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ದೆಹಲಿ ಕಾಂಗ್ರೆಸ್ ನಾಯಕ ವಿಜಯ್ ಜತನ್, ಹಿರಿಯ ಮುಖಂಡ ಜಗದೀಶ್ ಟೈಟ್ಲರ್ ಸೇರಿದಂತೆ ಹಲವು ಕಾರ್ಯಕರ್ತರು ತುಘಲಕ್ ಲೇನ್ ನಲ್ಲಿರುವ ರಾಹುಲ್ ನಿವಾಸದ ಎದುರು ನಡೆದ ಧರಣಿಯಲ್ಲಿ ಭಾಗವಹಿಸಿದ್ದರು. ಈ ವೇಳೆ ರಾಹುಲ್ ರಾಜೀನಾಮೆ ತೀರ್ಮಾನದಿಂದ ಹಿಂದಕ್ಕೆ ಸರಿದು ಪಕ್ಷದ ನಾಯಕತ್ವನ್ನು ಮುಂದುವರಿಸಬೇಕು ಎಂದು ಅವರು ಮನವಿ ಮಾಡಿದರು.
ಲೋಕಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಪಕ್ಷ ಹಿರಿಯ ನಾಯಕರನ್ನು ಭೇಟಿ ಮಾಡಿದ್ದ ರಾಹುಲ್ ಗಾಂಧಿ ಪಕ್ಷದ ಜವಾಬ್ದಾರಿ ವಹಿಸಿಕೊಳ್ಳಲು ನೆಹರು ಕುಟುಂಬ ಹೊರತು ಪಡಿಸಿ ಸಮರ್ಥ ನಾಯಕರನ್ನು ಆಯ್ಕೆ ಮಾಡುವಂತೆ ಸೂಚನೆ ನೀಡಿದ್ದರು. ಆ ಬಳಿಕ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳದೆ ದೂರ ಉಳಿದಿದ್ದಾರೆ.
ಇದೀಗ ರಾಹುಲ್ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ನ ಹಿರಿಯ ನಾಯಕರು ಪ್ರಯತ್ನ ನಡೆಸಿದ್ದಾರೆ, ಮಾತ್ರವಲ್ಲ, ನವದೆಹಲಿಯ ರಾಹುಲ್ ಗಾಂಧಿ ನಿವಾಸ ಎದುರು ಧರಣಿ ನಡೆಸಿದ್ದಾರೆ.