ಶ್ರೀನಗರ, ಮೇ31(Daijiworld News/SS): ಭದ್ರತಾಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ.
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಭದ್ರತಾಪಡೆ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿದಾಳಿ ನಡೆಸಿದ ಭದ್ರತಾಪಡೆ ಏನ್ಕೌಂಟರ್ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಕಣಿವೆ ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ ಮಾಹಿತಿ ಮೇರೆಗೆ ದಾಳಿ ನಡೆದಿದೆ.
ಉಗ್ರರು ಅಡಗಿರುವ ಶಂಕೆ ಮೇರೆಗೆ ಭದ್ರತಾಪಡೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಈ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಉನ್ನತ ಕಮಾಂಡರ್ಗಳು ಸಿಕ್ಕಿಬಿದ್ದಿದ್ದಾರೆ ಎಂದು ಮೂಲಗಳು ತಿಳಿಸಿವೆ.