ಪುಣೆ, ಸೆ.26(DaijiworldNews/TA): ಭಾರೀ ಮಳೆಯಿಂದಾಗಿ ಪ್ರಧಾನಿ ನರೇಂದ್ರ ಮೋದಿಯವರ ಪುಣೆ ಪ್ರವಾಸವನ್ನುರದ್ದುಗೊಳಿಸಲಾಗಿದೆ. ಶಿವಾಜಿನಗರದಿಂದ ಸ್ವರ್ಗಗೇಟ್ವರೆಗಿನ ಭೂಗತ ಮೆಟ್ರೋ ಮಾರ್ಗವನ್ನು ಉದ್ಘಾಟಿಸಲು ಮೋದಿ ಆಗಮನ ನಿಗಧಿಯಾಗಿತ್ತು.
ಉದ್ಘಾಟನಾ ಸಮಾರಂಭದ ನಂತರ, ಪ್ರಧಾನಿ ಪುಣೆಯ ಎಸ್ಪಿ ಕಾಲೇಜಿನಲ್ಲಿ ಸಭೆಯಲ್ಲಿ ಭಾಗವಹಿಸಬೇಕಿತ್ತು. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಬುಧವಾರ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗಣೇಶ ಕಲಾ ಕ್ರೀಡಾ ಮಂಚ್ನಲ್ಲಿ ಪರ್ಯಾಯ ವ್ಯವಸ್ಥೆ ಮಾಡಿದರು. ಆದರೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಧಿಕಾರಿಗಳು ರೆಡ್ ಅಲರ್ಟ್ ಘೋಷಿಸಿದ್ದಾರೆ.
ಗುರುವಾರದವರೆಗೆ ನಗರದ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ತಿಳಿಸಲಾಗಿದೆ. ಮುಂಬೈ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.