ನವದೆಹಲಿ, ಮೇ 31 (Daijiworld News/SM): ಈಗಾಗಲೇ ದೇಶದಲ್ಲಿ ಮೋದಿ ನೇತೃತ್ವದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದು, ಪ್ರಧಾನಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ಸ್ವೀಕರಿಸಿದ್ದಾರೆ. ಇದೀಗ ೨ನೇ ಬಾರಿ ಪ್ರಧಾನಿಯಾದ ಬಳಿಕ 16ನೇ ಲೋಕಸಭೆಯ ಮುಂಗಾರು ಅಧಿವೇಶನದ ಡೇಟ್ ಫಿಕ್ಸ್ ಆಗಿದೆ. ಜೂನ್ 17 ರಿಂದ ಮುಂಗಾರು ಅಧಿವೇಶನ ಆರಂಭವಾಗಲಿದೆ.
2019ರ ಲೋಕಸಭಾ ಚುನಾವಣೆ ಮುಗಿದು ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುಂಗಾರು ಅಧಿವೇಶದನ ದಿನಾಂಕವನ್ನು ನಿಗದಿ ಮಾಡಲಾಗಿದೆ.
ಜೂನ್ 17ರಿಂದ ಅಧಿವೇಶನ ಆರಂಭವಾಗಲಿದೆ. ಜೂನ್ 17 ರಿಂದ 26ರ ತನಕ ಮುಂಗಾರು ಅಧಿವೇಶನ ನಡೆಯಲಿದೆ. ಜೂನ್ 19ರಂದು ಲೋಕಸಭೆಗೆ ನೂತನ ಸ್ಪೀಕರ್ ಆಯ್ಕೆ ಕಾರ್ಯ ನಡೆಯಲಿದೆ. ಜೂನ್ 17 ರಿಂದ 19ರ ತನಕ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ 16ನೇ ಲೋಕಸಭೆಗೆ ಆಯ್ಕೆಯಾದ ನೂತನ ಸದಸ್ಯರ ಪ್ರಮಾಣ ವಚನ ಪ್ರಕ್ರಿಯೆಗಳು ನಡೆಯಲಿದೆ. ಸದನದಲ್ಲಿ ರಾಷ್ಟ್ರಪತಿಗಳ ಭಾಷಣದ ಬಳಿಕ ಸದನ ಆರಂಭಗೊಳ್ಳಲಿದೆ.
ಇನ್ನು ಜುಲೈ ತಿಂಗಳಿನಲ್ಲಿ ಬಜೆಟ್ ಅಧಿವೇಶನ ನಡೆಯುವ ಸಾಧ್ಯತೆ ಇದೆ.