ದೆಹಲಿ, ಸೆ.26(DaijiworldNews/TA):ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ದೆಹಲಿ ವಿಧಾನಸಭೆಯಲ್ಲಿ ಮಾಡಿದ ಮೊದಲ ಭಾಷಣದಲ್ಲಿ, ಕೇಜ್ರಿವಾಲ್ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದರು, ಪ್ರಧಾನಿ ತುಂಬಾ ಶಕ್ತಿಶಾಲಿ ಆದರೆ ಅವರು ದೇವರಲ್ಲ ಎಂದು ಹೇಳಿದರು. ಎಎಪಿ ನಾಯಕ ಮತ್ತು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಗುರುವಾರ ದೆಹಲಿ ವಿಧಾನಸಭೆ ಅಧಿವೇಶನ ಉದ್ದೇಶಿಸಿ ಮಾತನಾಡಿದರು.
"ವಿರೋಧ ಪಕ್ಷದಲ್ಲಿರುವ ನನ್ನ ಸಹೋದ್ಯೋಗಿಗಳಿಗೆ ಸದನದಲ್ಲಿ ಮನೀಷ್ ಸಿಸೋಡಿಯಾ ಮತ್ತು ನನ್ನನ್ನು ನೋಡಿ ಬೇಸರವಾಗಿರಬೇಕು. ನಾನು ಯಾವಾಗಲೂ ಹೇಳುತ್ತೇನೆ ಪ್ರಧಾನಿ ಮೋದಿ ತುಂಬಾ ಶಕ್ತಿಶಾಲಿ ಮತ್ತು ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿದ್ದಾರೆ ಆದರೆ ಮೋದಿ ದೇವರಲ್ಲ ಆದರೆ ದೇವರು ನಮ್ಮೊಂದಿಗಿದ್ದಾನೆ" ಎಂದು ಅವರು ಹೇಳಿದರು.
“ದೆಹಲಿಯಲ್ಲಿ ಯಾರೂ ಕೇಜ್ರಿವಾಲ್ ಅಪ್ರಾಮಾಣಿಕ ಎಂದು ಹೇಳುವುದಿಲ್ಲ. ಕೇಜ್ರಿವಾಲ್ ಅವರ ವಿರುದ್ಧ ನಕಲಿ ಪ್ರಕರಣಗಳು ದಾಖಲಾಗಿವೆ. ಬಿಜೆಪಿ ನಾಯಕರು ಎಎಪಿ ನಾಯಕರನ್ನು ಜೈಲಿಗೆ ಹಾಕಿದ್ದಾರೆ ಎಂದು ಜನರು ಹೇಳುತ್ತಾರೆ. ನಾನು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಿದ್ದೇನೆಯೇ ವಿನಃ ತಪ್ಪಿತಸ್ಥನೆಂಬ ಕಾರಣಕ್ಕಲ್ಲ” ಎಂದರು.