ಮೈಸೂರು, ಸೆ.27(DaijiworldNews/TA):ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇದರ ವಿರುದ್ಧ ಮೈಸೂರಿನಲ್ಲಿ ಸಿಎಂ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಸಿಎಂ ತವರು ಜಿಲ್ಲೆಯಲ್ಲಿ ನಗರಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದಾರೆ. ಹೌದು, ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪಂಜು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಲೋಕಾಯುಕ್ತ ಎಡಿಜಿಪಿ ಮನೀಶ್ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಸಿಆರ್ಪಿಸಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿ ಎಂದು ಕೋರ್ಟ್ ಆದೇಶ ಕೂಡಾ ನೀಡಿತ್ತು. ಅದೇ ಕಾಯ್ದೆಯಡಿ ಇದೀಗ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.