ದಾವಣಗೆರೆ, ಸೆ.29(DaijiworldNews/AA): ಬಿಜೆಪಿ ರಾಜ್ಯಾಧ್ಯಕ್ಷರ ಬದಲಾಯಿಸುವ ಅಧಿಕಾರ ನಮಗಿಲ್ಲ. ಹೈಕಮಾಂಡ್ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ. ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು ನೋಡುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ಭಿನ್ನಮತ ಇದೆ. ಪಕ್ಷದ ಗೊಂದಲಗಳ ಬಗ್ಗೆ ಹೈಕಮಾಂಡ್ ಗೆ ಮಾಹಿತಿ ರವಾನೆ ಮಾಡಲಾಗಿದೆ. ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚಿಸಿದೆ. ಹೀಗಾಗಿ ನಾವು ಹೆಚ್ಚು ಮಾತಾಡಲ್ಲ ಎಂದು ಹೇಳಿದ್ದಾರೆ.
ಕೆಲವರು ಸಿಎಂ ಆಗಲು ಸಾವಿರ ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ. ಇದರಲ್ಲಿ ಕಾಂಗ್ರೆಸ್ನವರೂ ಇದ್ದಾರೆ, ಬೇರೆ ಪಕ್ಷದವರೂ ಇದ್ದಾರೆ. ಭ್ರಷ್ಟಾಚಾರ ನಡೆಸಿ ಸಾಕಷ್ಟು ದುಡ್ಡು ಮಾಡಿದ್ದಾರೆ? ಎಂದು ಪರೋಕ್ಷವಾಗಿ ವಿಜಯೇಂದ್ರ ವಿರುದ್ಧ ಆರೋಪ ಮಾಡಿದ್ದಾರೆ. ನಾವು ಈಗ ಆಪರೇಷನ್ ಕಮಲ ಮಾಡುವ ಪ್ರಯತ್ನ ಮಾಡಲ್ಲ. ಮುಂದಿನ ದಿನಗಳಲ್ಲಿ ನಮಗೆ ಸಂಪೂರ್ಣ ಬಹುಮತ ಸಿಗಲಿದೆ. ಈ ಹಿಂದೆ ಕೆಲವರ ಬಳಿ ಹಣದ ಕೌಂಟಿಂಗ್ ಮಷೀನ್ ಸಿಕ್ಕಿವೆ. ವಿಜಯೇಂದ್ರ ಅವರು ನಮ್ಮ ತಂದೆಯಿಂದ ಸಂಸ್ಕಾರ ಸಿಕ್ಕಿದೆ ಎಂದಿದ್ದರು. ಅವರಿಗೆ ಚಿತ್ರದುರ್ಗದ ಮನೆಯೊಂದರಲ್ಲಿ ಸಂಸ್ಕಾರ ಸಿಕ್ಕಿದೆ ಎಂದು ಹೇಳಿದ್ದಾರೆ.
ಬಿಜೆಪಿಯಲ್ಲಿ ಭಿನ್ನಮತ ಇದೆ. ಪಕ್ಷದ ಗೊಂದಲಗಳ ಬಗ್ಗೆ ಹೈಕಮಾಂಡ್ ಗೆ ಮಾಹಿತಿ ರವಾನೆ ಮಾಡಲಾಗಿದೆ. ಬಹಿರಂಗ ಹೇಳಿಕೆ ನೀಡದಂತೆ ಹೈಕಮಾಂಡ್ ಸೂಚಿಸಿದೆ. ಹೀಗಾಗಿ ನಾವು ಹೆಚ್ಚು ಮಾತಾಡಲ್ಲ. ಬಿಜೆಪಿ ರಾಜ್ಯಾಧ್ಯಕ್ಷರ ಬದಲಾಯಿಸುವ ಅಧಿಕಾರ ನಮಗಿಲ್ಲ. ಹೈಕಮಾಂಡ್? ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೆ. ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತೋ ಕಾದು ನೋಡುತ್ತೇವೆ ಎಂದಿದ್ದಾರೆ.