ನವದೆಹಲಿ, ಅ.02(DaijiworldNews/TA):ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಲ್ಲಿರುವ ಇಸ್ರೇಲ್ ರಾಯಭಾರ ಕಚೇರಿಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.
ದೆಹಲಿ ಪೊಲೀಸರು ರಾಯಭಾರ ಕಚೇರಿಯಲ್ಲಿ ಮತ್ತು ಸಮೀಪದಲ್ಲಿ ಗಸ್ತು ಹೆಚ್ಚಿಸಿದ್ದಾರೆ ಮತ್ತು ಅದರ ತಂಡಗಳನ್ನು ಯಾವಾಗಲೂ ಕಟ್ಟಡದಲ್ಲಿ ನಿಯೋಜಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಇರಾನ್, ಇಸ್ರೇಲ್ ಮೇಲೆ 181 ಕ್ಷಿಪಣಿಗಳ ದಾಳಿ ಮಾಡಿದ ನಂತರ ಈ ಕ್ರಮಕೈಗೊಳ್ಳಲಾಗಿದೆ. ಕಚೇರಿಯ ಸುತ್ತಮುತ್ತ ಪೊಲೀಸರ ಗಸ್ತು ಹೆಚ್ಚಿಸಲಾಗಿದೆ. ಕಚೇರಿಯಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ ಎಂಬುವುದಾಗಿ ವರದಿಯಾಗಿದೆ.