ಬೆಂಗಳೂರು, ಅ.02(DaijiworldNews/TA):ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಇಡಿ ಅಧಿಕಾರಿಗಳು ಮುಡಾ ಆಯುಕ್ತರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ , ಕುಮಾರಸ್ವಾಮಿ ಅವರನ್ನು ಅರೆಸ್ಟ್ ಮಾಡಲಿ ಎಂದು ಹೇಳಿದ್ದಾರೆ.
ಮೊದಲು ಮೂಡಾ ಆಯುಕ್ತರನ್ನ ಬಂಧಿಸಬೇಕು. ಅವರು ಯಾವ ಆಧಾರದ ಮೇಲೆ ಸಿಎಂ ಸಿದ್ದರಾಮಯ್ಯ ಪತ್ನಿಗೆ ನೀಡಿರುವ ಸೈಟುಗಳನ್ನ ವಾಪಸ್ ಪಡೆದರು ಅನ್ನೋದು ತನಿಖೆಯಾಗಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದರು ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಈ ರೀತಿ ಸ್ಫೋಟಕ ಹೇಳಿಕೆ ನೀಡಿದ್ಧಾರೆ.
ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ತಮಗೆ ಹಂಚಿಕೆ ಮಾಡಲಾಗಿದ್ದ 14 ನಿವೇಶನಗಳನ್ನು ವಾಪಸ್ ನೀಡಿದ ಬಳಿಕ ಗದ್ದಲ ಇನ್ನಷ್ಟು ತೀವ್ರಗೊಂಡಿದ್ದು ಪ್ರತಿಪಕ್ಷದ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ.