ಬೆಂಗಳೂರು,ಅ. 03(DaijiworldNews/AK): 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಉದ್ಯಮಿ ವಿಜಯ್ ಟಾಟಾ ನೀಡಿದ್ದ ದೂರಿನ ಮೇರೆಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
BNS U/s3(5)308,(2)351(2) ಅಡಿಯಲ್ಲಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಎಂಎಲ್ಸಿ ರಮೇಶ್ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹಾಗೂ ರಮೇಶ್ ಗೌಡ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಠಾಣೆಗೆ ದೂರು ನೀಡಲಾಗಿತ್ತು. ನಂತರ ಆ ಬಗ್ಗೆ ಹೇಳಿಕೆ ನೀಡಿ, 50 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದರು ಎಂದು ಆರೋಪಿಸಿದ್ದರು. ಈ ದೂರಿನ ಮೇರೆಗೆ ಇದೀಗ ಕುಮಾರಸ್ವಾಮಿ ಮತ್ತು ಎಂಎಲ್ಸಿ ರಮೇಶ್ ಗೌಡ ವಿರುದ್ಧ ಎಫ್ಐಆರ್ ದಾಖಲಾಗಿದೆ.