ದೆಹಲಿ, ಅ. 03(DaijiworldNews/AK): ಕೇಂದ್ರ ಸಚಿವ ಸಂಪುಟವು ಇನ್ನೂ ಐದು ಭಾಷೆಗಳನ್ನು “ಶಾಸ್ತ್ರೀಯ” ಎಂದು ಗುರುತಿಸಲು ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ, ಬೆಂಗಾಲಿ ಭಾಷೆಗಳನ್ನು ಪ್ರತಿಷ್ಠಿತ ವಿಭಾಗದಲ್ಲಿ ಸೇರಿಸಲಾಗಿದೆ ಎಂದು ವೈಷ್ಣವ್ ಹೇಳಿದರು.
ಪ್ರಧಾನಿ ಮೋದಿಯವರು ಯಾವಾಗಲೂ ಭಾರತೀಯ ಭಾಷೆಗಳ ಮೇಲೆ ಗಮನ ಕೇಂದ್ರೀಕರಿಸಿದ್ದಾರೆ.ಇಂದು ಐದು ಭಾಷೆಗಳು ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬೆಂಗಾಲಿಯನ್ನು ಶಾಸ್ತ್ರೀಯ ಭಾಷೆಗಳಾಗಿ ಅಂಗೀಕರಿಸಲಾಗಿದೆ ಎಂದು ವೈಷ್ಣವ್ ಹೇಳಿದರು.
ಈ ಭಾಷೆಗಳು ಈಗಾಗಲೇ ಶಾಸ್ತ್ರೀಯವೆಂದು ಗುರುತಿಸಲ್ಪಟ್ಟಿರುವ ಇತರ ಆರು ಭಾಷೆಗಳಾದ ತಮಿಳು, ಸಂಸ್ಕೃತ, ತೆಲುಗು, ಕನ್ನಡ, ಮಲಯಾಳಂ ಮತ್ತು ಒಡಿಯಾದ ಪಟ್ಟಿಗೆ ಸೇರುತ್ತವೆ.