ಬೆಂಗಳೂರು, ಅ. 06(DaijiworldNews/TA):ಜಾತಿಗಣತಿ ಜಾರಿಯಿಂದ ಎಲ್ಲ ಸಮುದಾಯಗಳಿಗೆ ಅನುಕೂಲ ಆಗಲಿದೆ. ಜಾತಿಗಣತಿ ಜಾರಿಯಿಂದಲೇ ಸರ್ಕಾರ ಉರುಳುತ್ತದೆ ಎಂದಾದರೆ ಹಾಗೆಯೇ ಆಗಲಿ ಎಂದು ಎಂಎಲ್ಸಿ ಬಿಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಪ್ರಣಾಳಿಯಲ್ಲೇ ಜಾತಿಗಣತಿ ಜಾರಿ ಬಗ್ಗೆ ಉಲ್ಲೇಖಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಕೂಡ ಆ ಬಗ್ಗೆ ಪ್ರಸ್ತಾಪಿಸಿದ್ದರು.
ಸರ್ಕಾರ ಬಿದ್ದರೆ ಬೀಳಲಿ. ಕರ್ನಾಟಕದಲ್ಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ಹೇಳಿಕೆ ನೀಡಿದ್ದಾರೆ. ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿ ಮಾಡಲಿ ಎಂದು ಹೇಳಿಕೆ ನೀಡಿದ್ದಾರೆ.