ಕೋಲ್ಕತ್ತಾ, ಜೂ01(Daijiworld News/SS): ಕೇಂದ್ರದ ಯೋಜನೆಗಳು ಬೇಕಿಲ್ಲ ಅಂತಾ ಅಧಿಕ ಪ್ರಸಂಗ ಮಾಡುವುದಕ್ಕೆ ಮಮತಾ ಬ್ಯಾನರ್ಜಿ ಅವರು ಮುಂದಾದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆಯ ರಾಜ್ಯ ಸಚಿವೆ ದೇಬಶ್ರೀ ಚೌಧರಿ ಎಚ್ಚರಿಕೆ ನೀಡಿದ್ದಾರೆ.
ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ಅಡ್ಡಿ ಪಡಿಸಿದ್ದೇ ಆದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮತ್ತಷ್ಟು ಹಿನ್ನಡೆ ಅನುಭವಿಸಬೇಕಾಗುತ್ತದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ರಾಜ್ಯದಲ್ಲಿ ಜಾರಿಗೆ ತರಲು ರಾಜ್ಯ ಸರ್ಕಾರದೊಂದಿಗೆ ಉತ್ತಮ ಬಾಂಧವ್ಯ ಹೊಂದಿ ಕೆಲಸ ಮಾಡಬೇಕಾಗುತ್ತದೆ ಎಂದು ಕಿವಿ ಮಾತು ಹೇಳಿದ್ದಾರೆ.
ಕೇಂದ್ರಕ್ಕೆ ಅಡ್ಡಿಪಡಿಸುವ ಅಥವಾ ಕೇಂದ್ರದ ಯೋಜನೆಗಳು ಬೇಕಿಲ್ಲ ಎಂದು ಅಧಿಕ ಪ್ರಸಂಗ ಮಾಡುವುದಕ್ಕೆ ಮಮತಾ ಬ್ಯಾನರ್ಜಿ ಅವರು ಮುಂದಾದರೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ. ಕೆಲವೊಂದು ಮನಃಸ್ತಾಪಗಳು ಇರುವುದರಿಂದ ಪಶ್ಚಿಮ ಬಂಗಾಳದಲ್ಲಿ ಕೇಂದ್ರದ ಯೋಜನೆಗಳನ್ನು ಜಾರಿಗೆ ತರುವುದು ಸುಲಭವಿಲ್ಲ. ಆದರೆ ನಾನು ಇವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೊಸ ಎನ್'ಡಿಎ ಸರ್ಕಾರದಲ್ಲಿ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಸಂಸದೆ ಚೌಧರಿ ಅವರಿಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಖಾತೆಯ ರಾಜ್ಯ ಸಚಿವೆಯ ಸ್ಥಾನ ನೀಡಲಾಗಿದೆ.