ನವದೆಹಲಿ, ಅ.08(DaijiworldNews/AA): ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ರಾಜ್ಯಗಳ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಮುನ್ನಡೆ ಸಾಧಿಸಿದ ಬೆನ್ನಲ್ಲೇ ಹರಿಯಾಣದಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ.
ಇಂದು ಬೆಳಗ್ಗೆ 8:15ರ ವೇಳೆಗೆ ಹರಿಯಾಣದಲ್ಲಿ ಕಾಂಗ್ರೆಸ್ 29, ಬಿಜೆಪಿ 17, ಐಎನ್ಎಲ್ಡಿ 2 ಹಾಗೂ ಇತರೇ ಪಕ್ಷಗಳು 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದವು. ಇನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ಎನ್ಸಿ ಮೈತ್ರಿ ಕೂಟ 10, ಬಿಜೆಪಿ 8, ಪಿಡಿಪಿ 2 ಹಾಗೂ ಇತರೇ ಪಕ್ಷಗಳು 1 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿವೆ.
ಇಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ರಾಜ್ಯಗಳಲ್ಲಿ ತಲಾ 90 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಹೊರಬೀಳಲಿದೆ. ಈಗಾಗಲೇ ಉಭಯ ರಾಜ್ಯಗಳಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ.