ಮುಂಬೈ,ಅ. 10(DaijiworldNews/TA):ಕೈಗಾರಿಕೋದ್ಯಮಿ ರತನ್ ನೇವಲ್ ಟಾಟಾ ಅವರ ಅಂತಿಮ ವಿಧಿಗಳನ್ನು ಇಂದು ಸಂಜೆ ಮುಂಬೈನ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.
ಟಾಟಾ ಅವರಿಗೆ ಅಂತಿಮ ನಮನ ಸಲ್ಲಿಸಲು ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಸೇರಿದ್ದರು. ಆಸಿಯಾನ್-ಭಾರತ ಮತ್ತು ಪೂರ್ವ ಏಷ್ಯಾ ಶೃಂಗಸಭೆಗಳಲ್ಲಿ ಪಾಲ್ಗೊಳ್ಳಲು ಲಾವೋಸ್ಗೆ ಪ್ರಧಾನಿ ನರೇಂದ್ರ ಮೋದಿ ತೆರಳಿದ್ದಾರೆ. ಹೀಗಾಗಿ ಅವರ ಪರವಾಗಿ ಅಮಿತ್ ಶಾ ಅವರು ರತನ್ ಟಾಟಾ ಅಂತ್ಯಕ್ರಿಯೆ ವೇಳೆ ಪಾಲ್ಗೊಂಡಿದ್ದರು ಎಂದು ಹೇಳಲಾಗಿದೆ.
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅಕ್ಟೋಬರ್ 9 ರಂದು ತಮ್ಮ 86 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದರು. ಅವರ ಅಂತಿಮ ಸಂಸ್ಕಾರ ಸಕಲ ಗೌರವಗಳೊಂದಿಗೆ ನೆರವೇರಿತು.