ದೆಹಲಿ, ಅ.11(DaijiworldNews/AA): ಆಮ್ ಆದ್ಮಿ ಪಕ್ಷ(ಎಎಪಿ)ವು ಜಮ್ಮು ಮತ್ತು ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಗೆ ತನ್ನ ಬೆಂಬಲ ನೀಡುವುದಾಗಿ ಘೋಷಣೆ ಮಾಡಿದ್ದು, ಎಎಪಿ ಲೆಫ್ಟಿನೆಂಟ್ ಗವರ್ನರ್ ಅವರಿಗೆ ಬೆಂಬಲ ಪತ್ರವನ್ನು ಹಸ್ತಾಂತರ ಮಾಡಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ದೋಡಾ ಕ್ಷೇತ್ರವೊಂದರಲ್ಲಿ ಮಾತ್ರ ಎಎಪಿ ಗೆದ್ದಿದೆ. ಈ ಕ್ಷೇತ್ರದಲ್ಲಿ ಎಎಪಿಯ ಮೆಹ್ರಾಜ್ ಮಲಿಕ್ ಅವರು ಬಿಜೆಪಿಯ ಗಜಯ್ ಸಿಂಗ್ ರಾಣಾ ಅವರನ್ನು 4538 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಇನ್ನು ನಾಲ್ವರು ಸ್ವತಂತ್ರ ಶಾಸಕರು ಪಕ್ಷಕ್ಕೆ ಸೇರುವ ನಿರ್ಧಾರದ ಬಳಿಕ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯಲ್ಲಿ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ನಿನ್ನೆ ಬಹುಮತ ಸಾಧಿಸಿದೆ.