ಹುಬ್ಬಳ್ಳಿ,ಅ.12(DaijiworldNews/TA):ವಿಜಯದಶಮಿಯಾದ ಬಳಿಕ ಸಿಎಂ ರಾಜೀನಾಮೆ ನೀಡುತ್ತಾರೆ , ಸಿದ್ದರಾಮಯ್ಯನವರಿಗೆ ಇದು ಕೊನೆಯ ವಿಜಯದಶಮಿ ಎಂದು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ. ಈಗಾಗಲೇ ಕೆಲವರು ಸಿಎಂ ಸೀಟಿಗೆ ಟವಲ್ ಹಾಕಿದ್ದಾರೆ. ಮುಡಾ ಹಾಗೂ ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್ ಸಿಲುಕಿದೆ. ವಿಷಯ ಮರೆಮಾಚಲು ಕಾಂಗ್ರೆಸ್ ಸರ್ಕಾರ ಏನೇನೋ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಮುಂದುವರೆದು ಮಾತನಾಡಿ ಹಳೇ ಹುಬ್ಬಳ್ಳಿ ಗಲಭೆ ಕೇಸ್ ವಾಪಸ್ ಪಡೆದಿರೋ ವಿಚಾರವಾಗಿ ನಾವು ಇದನ್ನು ಬಿಡುವುದಿಲ್ಲ, ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಸಭೆ ಮಾಡಿ ಹೋರಾಟದ ಸಿದ್ಧತೆ ಮಾಡುತ್ತೇವೆ ಎಂದು ಹೇಳಿದರು.