ಹುಬ್ಬಳ್ಳಿ,ಅ.13(DaijiworldNews/TA):ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಒಬ್ಬ ಭಯೋತ್ಪಾದಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಹಳೇ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ ಪಡೆದಿದ್ದಕ್ಕೆ ಸರ್ಕಾರದ ವಿರುದ್ಧ ವಿರೋಧ ಪಕ್ಷದ ವಿರೋಧ ವ್ಯಕ್ತವಾಗಿದೆ. ರಾಜ್ಯ ಬಿಜೆಪಿ ನಾಯಕರು ಸಿಎಂ ವಿರುದ್ಧ ಹೇಳಿಕೆಗಳನ್ನು ನೀಡಿ ಕಿಡಿಕಾರಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಈ ರೀತಿ ಹೇಳಿಕೆ ನೀಡಿದ್ದಾರೆ.
ರವಿವಾರ ಹುಬ್ಬಳ್ಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದ ಸಮಯದಲ್ಲಿ ಬಿಜೆಪಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿತು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಯೋತ್ಪಾದಕ ಎಂದು ಹೇಳಿದ್ದಾರೆ.