ಕೋಲ್ಕತಾ,ಜೂ02(DaijiworldNews/AZM) :ರಾಮನ ಹೆಸರಿನಲ್ಲಿ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಜಾಸ್ತಿಯಾಗುತ್ತಿದೆ. ಇದೀಗ ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಮಮತಾ ಬ್ಯಾಜರ್ಜಿ ಅವರಿಗೆ ಜೈ ಶ್ರೀರಾಮ್ ಎಂದು ಬರೆಯಲಾಗಿರುವ 10 ಲಕ್ಷ ಪೋಸ್ಟ್ ಕಾರ್ಡ್ಗಳನ್ನು ಕಳುಹಿಸುತ್ತಾರಂತೆ
ಈ ಕುರಿತು ಬಿಜೆಪಿ ಸಂಸದ ಅರ್ಜುನ್ ಸಿಂಗ್ ಮಾತನಾಡಿ , ಮಮತಾ ಬ್ಯಾನರ್ಜಿ ಅವರು ಜೈ ಶ್ರೀರಾಮ್ ಎಂದು ಬರೆದಿರುವ 10 ಮಂದಿಯನ್ನು ಬಂಧಿಸಿದ್ದಾರೆ. ನಾವು ಜೈ ಶ್ರೀರಾಮ್ ಎಂದು ಬರೆದಿರುವ 10 ಲಕ್ಷ ಕಾರ್ಡ್ಗಳನ್ನುಕಳುಸಿಸುತ್ತೇವೆ. 10 ಲಕ್ಷ ಮಂದಿಯನ್ನು ಬಂಧಿಸುತ್ತಾರೆಯೇ . ಮಮತಾ ಬ್ಯಾನರ್ಜಿ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಪ್ರಚಾರದಕಾವಿನೊಂದಿಗೆ ಜೈ ಶ್ರೀರಾಮ್ ಎನ್ನುವ ಘೋಷಣೆಗಳು ತೀವ್ರವಾಗಿದ್ದವು. ಮಮತಾ ಬ್ಯಾನರ್ಜಿ ಅವರ ಕಾರಿನ ಎದುರು ಜೈ ಶ್ರೀರಾಮ್ ಘೋಷಣೆಗಳನ್ನು ಕೂಗಲಾಗಿತ್ತು. ಇದು ದೀದಿ ಅವರನ್ನು ಕೆರಳಿಸಿತ್ತು.