ಬೆಂಗಳೂರು, ಅ.16(DaijiworldNews/AA): ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ನಾಗೇಂದ್ರ ಅವರು ಪರಪ್ಪನ ಅಗ್ರಹಾರ ಜೈಲಿಂದ ಇಂದು ಬಿಡುಗಡೆಯಾಗಿದ್ದಾರೆ.
ನೆಚ್ಚಿನ ನಾಯಕ ಜೈಲಿನಿಂದ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಬೆಂಬಲಿಗರು ಹೂವಿನ ಹಾರ ಹಾಕಿ, ಬೂದಗುಂಬಳ ಕಾಯಿ ಒಡೆದು ಸಂಭ್ರಮಿಸಿದ್ದಾರೆ.
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಇದೀಗ ನಾಗೇಂದ್ರ ಅವರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.