ಬೆಂಗಳೂರು,ಜೂ03(Daijiworld News/AZM): , ಮುಖ್ಯಮಂತ್ರಿ ಕುಮಾರಸ್ವಾಮಿಯವರು ‘ಗ್ರಾಮ ವಾಸ್ತವ್ಯ’ ಪರಿಕಲ್ಪನೆಯನ್ನು ಮತ್ತೆ ಜಾರಿಗೆ ತರಲಿಲು ಮುಂದಾಗಿದ್ದು, ಈ ಬಾರಿ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಉದ್ದೇಶದೊಂದಿಗೆ ಬದಲಾಯಿಸಲಾಗುತ್ತಿದೆ.
ಮುಖ್ಯಮಂತ್ರಿಗಳು, ಈ ಕುರಿತು ಟ್ವಿಟರ್ನಲ್ಲಿ ಭಾನುವಾರ ಅಭಿಪ್ರಾಯ ಹಂಚಿಕೊಂಡಿದ್ದು, ‘ಜನರೊಂದಿಗೆ ಬೆರೆಯಲು, ಅವರ ಸಮಸ್ಯೆಗಳನ್ನು ಅರಿಯಲು, ಸರ್ಕಾರದ ಕಾರ್ಯವೈಖರಿ ತಿಳಿಸಲು ನೆರವಾಗುವುದು ಗ್ರಾಮ ವಾಸ್ತವ್ಯ. ಶೀಘ್ರವೇ ನನ್ನ ಗ್ರಾಮ ವಾಸ್ತವ್ಯ ಪ್ರಾರಂಭವಾಗಲಿದೆ. ಸರ್ಕಾರಿ ಶಾಲೆಗಳಲ್ಲಿ,’ ಎಂದು ಹೇಳಿಕೊಂಡಿದ್ದಾರೆ.
ಕುಮಾರಸ್ವಾಮಿಯವರು ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ. ಭವಿಷ್ಯದ ಉತ್ತಮ ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಹೊತ್ತ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಸೇರಿದಂತೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಹಾಗೂ ಸ್ಥಳೀಯ ರೈತರು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಕ್ಕೆ ಈ ಬಾರಿ ಒತ್ತು ನೀಡುವ ನಿರೀಕ್ಷೆ ಇದೆ.