ಬೆಂಗಳೂರು,ಅ.2(DaijiworldNews/AK): ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಡಾನಾ ಚಂಡಮಾರುತದಿಂದ ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿಗೆ ಅಪಾಯವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕಯ ಸೂಚನೆ ನೀಡಿದೆ.
ಚಂಡಮಾರುತವಾಗಿ ಬದಲಾಗಿರುವ ಡಾನಾ ಗುರುವಾರ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ರಾತ್ರಿ ವೇಳೆಗೆ ಒಡಿಶಾದ ಪುರಿ ಮತ್ತು ಬಂಗಾಳದ ಸಾಗರ ದ್ವೀಪದ ನಡ್ವೆ ತೀರ ದಾಟಬಹುದು ಎಂದು ಅಂದಾಜಿಸಲಾಗಿದೆ. ಒಂದೊಮ್ಮೆ ಚಂಡಮಾರುತ ಪಥ ಬದಲಿಸಿದರೆ ಬಾಂಗ್ಲಾ ದೇಶಕ್ಕೆ ಅಪಾಯ ಎದುರಾಗಬಹುದು ಸೂಚನೆ ನೀಡಲಾಗಿದೆ.
ಒಡಿಶಾ, ಆಂಧ್ರ, ಬಂಗಾಳ ಮತ್ತು ತಮಿಳುನಾಡಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. 40ಕ್ಕೂ ಹೆಚ್ಚು ರೈಲುಗಳ ಸಂಚಾರ ರದ್ದು ಮಾಡಲಾಗಿದೆ. 200ಕ್ಕೂ ಹೆಚ್ಚು ರೈಲುಗಳ ಮಾರ್ಗ ಬದಲಿಸಲಾಗಿದೆ.