ಕಾರಾವಾರ, ಅ.24(DaijiworldNews/AK): ಬೇಲೇಕೇರಿ ಅದಿರು ಸಾಗಾಟ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಅಲ್ಲದೇ ಎಲ್ಲ ಆರೋಪಿಗಳನ್ನು ಕೂಡಲೇ ವಶಕ್ಕೆ ಪಡೆಯುವಂತೆ ಆದೇಶಿಸಿದೆ. ಆದರೆ ಶಿಕ್ಷೆಯ ಪ್ರಮಾಣವನ್ನು ಕೋರ್ಟ್ ನಾಳೆಗೆ ಕಾಯ್ದಿರಿಸಿದೆ.ಸೀಜ್ ಮಾಡಿದ್ದ ಸುಮಾರು 11, 312 ಮೆಟ್ರಿಕ್ ಟನ್ ಅದಿರನ್ನು ಅನುಮತಿ ಇಲ್ಲದೇ ಸಾಗಾಟ ಮಾಡಲಾಗಿತ್ತು. ಈ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಅಪರಾಧಿಗಳಾದ ಮಹೇಶ್ ಬಿಳಿಯೆ, ಮಲ್ಲಿಕಾರ್ಜುನ ಶಿಪ್ಪಿಂಗ್ ಹಾಗೂ ಶಾಸಕ ಸತೀಶ್ ಸೈಲ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಾಸಕ ಸತೀಶ್ ಸೈಲ್ ಸೇರಿದಂತೆ ಮೂವರು ಆರೋಪಿಗಳಿಗೆ ನಾಳೆ ಕೋರ್ಟ್ ಶಿಕ್ಷಯ ಪ್ರಮಾಣ ಪ್ರಕಟಿಸಲಿದೆ.